ದೇಶ- ವಿದೇಶ

ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧದ ಹೇಳಿಕೆ: ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್‌ ದಾಖಲು

ಗುವಾಹತಿ/ನವದೆಹಲಿ: ದೇಶದ ಪ್ರತಿಯೊಂದು ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ ಸಂಸದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ರಾಹುಲ್‌ ಗಾಂಧಿ ಅವರು ಜನವರಿ.15ರಂದು ಕಾಂಗ್ರೆಸ್‌ ಪಕ್ಷದ ಹೊಸ ಕಚೇರಿಯನ್ನು ದೆಹಲಿಯ ಕೋಟ್ಲ ರಸ್ತೆಯಲ್ಲಿ ಉದ್ಘಾಟನೆ ಮಾಡುವ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯೂ ದೇಶದಲ್ಲಿ ಎಲ್ಲಾ ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಂಜೀತ್‌ ಚೇಟಿಯಾ ಎಂಬುವವರು ರಾಹುಲ್‌ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ್ವಯ ಅಸ್ಸಾಂ ರಾಜ್ಯದ ಗುವಾಹತಿಯ ಪಾನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಇನ್ನೂ ರಾಹುಲ್‌ ಗಾಂಧಿ ಅವರ ಹೇಳಿಕೆಯೂ ದೇಶದ ಸಾರ್ವಭೌಮತ್ವ, ಏಕತೆ ಹಾಗೂ ಸಮಗ್ರತೆಗೆ ಅಪಾಯ ತರುವಂತಹ ಹೇಳಿಕೆಯಾಗಿದೆ. ಹೀಗಾಗಿ ಅವರ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 152 ಮತ್ತು 197(1) ಅಡಿ ಅನ್ವಯ ಎಫ್‌ಐಆರ್‌ ದಾಖಲಿಸಿದ್ದಾರೆ. ಈ ವಿಧಿಯೂ ಜಾಮೀಮು ರಹಿತ ಅಪರಾಧಕ್ಕೆ ಸಂಬಂಧಿಸಿದ ವಿಧಿಯಾಗಿದೆ.

ದೂರಿನಲ್ಲಿ ಏನಿದೆ?

ರಾಹುಲ್‌ ಗಾಂಧಿ ಅವರು ಅಂದು ನೀಡಿರುವ ಹೇಳಿಕೆಯೂ ಸ್ವೀಕಾರಾರ್ಹ ಮುಕ್ತ ವಾಕ್‌ ಸ್ವಾತಂತ್ರ್ಯದ ಗಡಿಯನ್ನು ಮೀರಿದ್ದಾಗಿದೆ. ಅಲ್ಲದೇ ಸಾರ್ವಜನಿಕ ವ್ಯವಸ್ಥೆ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

9 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

9 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago