ದೇಶ- ವಿದೇಶ

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಪಂದ್ಯಕ್ಕೆ ಸ್ಟೀವ್‌ ಸ್ಮಿತ್‌ ವಿದಾಯ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕನಾಗಿದ್ದ ಸ್ಟೀವ್‌ ಸ್ಮಿತ್‌ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ.

ದುಬೈನಲ್ಲಿ ಮಂಗಳವಾರ(ಮಾರ್ಚ್‌.4)ದಂದು ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ್ಲಿ ರೋಹಿತ್‌ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡವೂ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಆಯ್ಕೆಯಾಗಿದೆ.

ಈ ನಡುವೆ ಪಂದ್ಯದ ಮುಗಿದ ಮೇಲೆ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್‌ ಸ್ಮಿತ್‌ ಅವರು ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಸ್ಮಿತ್‌ ಟೆಸ್ಟ್‌ ಹಾಗೂ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ.

ಸ್ಮಿತ್‌ ಅವರು 2010 ರಲ್ಲಿ ಲೆಗ್ ಸ್ಪಿನ್ ಆಲ್ ರೌಂಡರ್ ಆಗಿ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೂ 170 ಏಕದಿನ ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. ಅಲ್ಲದೇ ಆ ಪಂದ್ಯಗಳಲ್ಲಿ 12 ಶತಕಗಳು, 35 ಅರ್ಧಶತಕಗಳು ಹಾಗೂ 28 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ಸ್ಮಿತ್‌ ಅವರು ಆಸ್ಟ್ರೇಲಿಯಾದ 2015 ಮತ್ತು 2023 ರ ಐಸಿಸಿ ವಿಶ್ವಕಪ್ ವಿಜೇತ ತಂಡಗಳ ಸದಸ್ಯರಾಗಿದ್ದರು. ಪ್ಯಾಟ್ ಕಮಿನ್ಸ್ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸ್ಟೀವ್ ಸ್ಮಿತ್ ಅವರನ್ನು ಆಸ್ಟ್ರೇಲಿಯಾ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

2 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

2 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

2 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

3 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

4 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

10 hours ago