ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯ ಮಾಡುವಂತೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ದೇಶದ ಜನತೆಗೆ ಸಲಹೆ ನೀಡಿದ್ದಾರೆ.
ವರ್ಕ್ ಫ್ರಮ್ ಹೋಮ್ ರೂಢಿಸಿಕೊಳ್ಳಿ
ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂಧನ ಬಳಕೆ ತಗ್ಗಿಸಿ, ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸಿ, ವರ್ಕ್ ಫ್ರಮ್ ಹೋಮ್ ರೂಢಿಸಿಕೊಳ್ಳಿ, ರಾಸಾಯನಿಕ ಗೊಬ್ಬರ ಕಡಿಮೆ ಮಾಡಿ, ಪರಿಸರ ಸಂರಕ್ಷಣೆಗೆ ಸಿಂಗಲ್ ಯೂಸ್ ಪ್ಲಾಸ್ಟಿಕ್ ಚೀಲಗಳ ಬಳಕೆ ನಿಲ್ಲಿಸಿ, ತಾಯಿ ಹೆಸರಲ್ಲಿ ಒಂದು ಸಸಿ ನೆಡುವ (ಏಕ್ ಪೇಡ್ ಮಾ ಕೆ ನಾಮ್) ಅಭಿಯಾನ ಉತ್ತೇಜಿಸಿ ಎಂದು ಕರೆ ನೀಡಿದ್ದಾರೆ.
ಚಿನ್ನ ಖರೀದಿ ನಿಲ್ಸಿ
ಹಾಗೆಯೇ ಭಾರತದ ವಿದೇಶಿ ವಿನಿಮಯ ಉಳಿಸಲು ಒಂದು ವರ್ಷ ಕಾಲ ಮದುವೆಗೆ ಚಿನ್ನ ಕೊಳ್ಳುವುದನ್ನು ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಭಾರತಕ್ಕೆ ಬಹುತೇಕ ಚಿನ್ನ ಆಮದು ಮಾಡಿಕೊಳ್ಳಬೇಕು, ಆದರೆ ಜಾಗತಿಕ ಅನಿಶ್ಚಿತತೆಯಿಂದ ಬೆಲೆ ಗಗನ ಮುಟ್ಟುತ್ತಿದೆ. ವಿದೇಶಿ ವಿನಿಮಯ ಖರ್ಚೂ ಹೆಚ್ಚಾಗುತ್ತಿರುವುದರಿಂದ ಪರಿಸ್ಥಿತಿ ಸುಧಾರಿಸುವವರಿಗೆ ಚಿನ್ನ ಖರೀದಿ ಬೇಡ ಎಂದು ಸಲಹೆ ಕೊಟ್ಟಿದ್ದಾರೆ. ಇಂಧನ ಸಂರಕ್ಷಣೆ ರಾಷ್ಟ್ರೀಯ ಜವಾಬ್ದಾರಿ ಎಂದೂ ಮೋದಿ ಹೇಳಿದ್ದಾರೆ.
ಇಂಧನ ಕಡಿಮೆ ಬಳ್ಸಿ
ವಿಶ್ವದ ಹಲವು ದೇಶಗಳಲ್ಲಿ ಈಗಾಗಲೇ ಕಚ್ಚಾತೈಲದ ಬೆಲೆ ಭಾರಿ ಏರಿಕೆ ಆಗಿದೆ. ಪಾಕಿಸ್ತಾನ ಸೇರಿದಂತೆ ಅಮೆರಿಕದಲ್ಲೂ ತೈಲ ಬೆಲೆ ತುಟ್ಟಿಯಾಗಿದೆ. ಆದರೆ ಸದ್ಯ ಡಿಸೇಲ್ ಪೆಟ್ರೋಲ್ ಬೆಲೆ ದೇಶದಲ್ಲಿ ಹೆಚ್ಚಳವಾಗಿಲ್ಲ. ಆದರೆ ಇದರ ಸಾಧ್ಯತೆ ಬಗ್ಗೆ ಪ್ರಧಾನಿ ಮೋದಿ ಅವರ ಮಾತಲ್ಲೇ ಮುನ್ಸೂಚನೆ ಇದೆ.
ಪೆಟ್ರೋಲ್- ಡೀಸೆಲ್ ಬಳಕೆ ಕಡಿಮೆ ಮಾಡಬೇಕು. ಇದರಿಂದ ವಿದೇಶಗಳಿಂದ ತರಿಸುವ ಆಮದು ಪ್ರಮಾಣದಲ್ಲಿ ಕಡಿಮೆ ಮಾಡಬಹುದು ವಿದೇಶಿ ವಿನಿಮಯಕ್ಕಾಗುವ ಖರ್ಚು ವೆಚ್ಚ ತಗ್ಗಿಸಬಹುದು ಎಂದಿದ್ದಾರೆ. ಹೀಗಾಗಿ ಜನರು ಯೋಚನೆ ಮಾಡಿ ಇಂಧನ ಬಳಸಬೇಕು. ಕೊರೊನಾ ಸಮಯದಲ್ಲಿ ವರ್ಕ್ ಫ್ರಾಂ ಹೋಂ ಮಾಡಲಾಗುತ್ತಿತ್ತು. ಆನ್ ಲೈನ್ ಮೀಟಿಂಗ್‌ಗಳನ್ನು ನಡೆಸಲಾಗುತ್ತಿತ್ತು. ವಿಡಿಯೋ ಕಾನ್ಫರೆನ್ಸ್ ಗಳನ್ನು ನಡೆಸಲಾಗ್ತಿತ್ತು. ಆಗೆಲ ಅದು ಅಭ್ಯಾಸವಾಗಿತ್ತು. ಈಗಲೂ ತೈಲ ಬಳಕೆ ಕಡಿಮೆ ಮಾಡಲು, ದೇಶದ ಮೇಲಿನ ಹೆಚ್ಚುವರಿ ಹೊರೆ ತಗ್ಗಿಸಲು ಇದನ್ನು ಮತ್ತೆ ಜಾರಿಗೆ ತರಬೇಕೆಂದು ಮನವಿ ಮಾಡಿದ್ದಾರೆ.
ಇರಾನ್ – ಅಮೆರಿಕ ಯುದ್ಧದ ಬಳಿಕ ಕಚ್ಚಾತೈಲದ ಬೆಲೆ ಬ್ಯಾರೆಲ್‌ಗೆ 70 ಯುಎಸ್ ಡಿ ಯಿಂದ 126 ಯುಎಸ್ಡಿ ಗೆ ಏರಿಕೆಯಾಗಿದೆ. ಇವೆಲ್ಲ ಹರ್ಮುಜ್ ಜಲಸಂಧಿಯ ಬಿಕ್ಕಟ್ಟಿನಿಂದಾಗಿದ್ದು, ಇನ್ನೂ ಕೂಡಾ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಹೀಗಾಗಿ ತೈಲದ ಬೆಲೆಯೂ ಇಳಿಕೆಯಾಗಿಲ್ಲ.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…