ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು ಅವುಗಳ ಬೆಂಬಲ ದೇಶಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ.
ಅಂತರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅರಾಘ್ಚಿ ಅವರು, “ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಲ್ಲ, ತೆರೆದಿದೆ. ನಮ್ಮ ಶತ್ರುಗಳು ಮತ್ತು ಅದರ ಬೆಂಬಲ ಮಿತ್ರ ರಾಷ್ಟ್ರಗಳಿಗೆ ಮಾತ್ರ ಮುಚ್ಚಲ್ಪಟ್ಟಿದೆ. ಇತರ ರಾಷ್ಟ್ರಗಳ ಹಡಗುಗಳು ಸುರಕ್ಷಿತವಾಗಿ ಸಾಗಣೆ ಮಾಡಬಹುದು ಎಂದು ಘೋಷಿಸಿದ್ದಾರೆ.
ಇರಾನ್ ಯುದ್ಧ ವಿರಾಮಕ್ಕೆ ಕೋರಿಲ್ಲ, ಯುದ್ಧ ನಿರ್ಣಾಯಕ ಅಂತ್ಯ ಬಯಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯುದ್ಧದಲ್ಲಿ ಭಾಗವಹಿಸದ ರಾಷ್ಟ್ರಗಳು ಇರಾನ್ ಅನುಮತಿಯೊಂದಿಗೆ ಜಲಸಂಧಿಯನ್ನು ಬಳಸಬಹುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಹೇಳಿಕೆಯು ಭಾರತಕ್ಕೆ ಸಕಾರಾತ್ಮಕ ಸೂಚನೆಯಾಗಿದ್ದು, ಇರಾನ್-ಅಮೆರಿಕ ಸಂಘರ್ಷ ತೀವ್ರಗೊಂಡ ನಂತರ ಹೊರ್ಮುಜ್ ಮೂಲಕ ಸಾಗಣೆ ತೀವ್ರವಾಗಿ ಕಡಿಮೆಯಾಗಿತ್ತು. ಆದರೆ ಭಾರತದ ಶಿವಾಲಿಕ್ ಟ್ಯಾಂಕರ್ ಇಂದು ಗುಜರಾತ್‌ನ ಮುಂದ್ರಾ ಪೋರ್ಟ್‌ಗೆ ಬಂದು ಸೇರಿದೆ. ನಾಳೆ ನಂದಾದೇವಿ ಕಾಂಡ್ಲಾಗೆ ತಲುಪುವ ನಿರೀಕ್ಷೆಯಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…
ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…