ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ
ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ ನಾಯಿಗಳ ದಾಳಿ ಬಗ್ಗೆ ವರದಿಗಳು ಹಾಗೂ ದೂರುಗಳು ಬರುತ್ತಿವೆ. ಹಾಗಾಗಿ ಬೀದಿನಾಯಿಗಳ ಕಡಿವಾಣಕ್ಕೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ವರದಿಗಳನ್ನು ನೀಡಬೇಕು ಎಂದು ಸರ್ಕಾರಗಳಿಗೆ ಸೂಚನೆ ನೀಡಿದೆ.
ಬೀದಿನಾಯಿಗಳ ಹಾವಳಿ ತಡೆಗಟ್ಟಲು ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿ ಮುಂದಿನ ವಿಚಾರಣೆಯಲ್ಲಿ ಹಾಜರಾಗುವಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.





