Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಖರ ಕಾರು ಸ್ಫೋಟದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಪೋಟದ ಹಿಂದೆ ಇರುವವರನ್ನು ಸುಮ್ಮನೆ ಬಿಡಲ್ಲ. ಕಟಕಟೆಗೆ ತಂದು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್‌ ಬ್ಲಾಸ್ಟ್‌ | ರಾಜ್ಯದಲ್ಲೂ ಅಲರ್ಟ್‌ ಘೋಷಣೆ ; ಸಿಎಂ

ಭೂತಾನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನಾನು ತುಂಬಾ ಭಾರವಾದ ಹೃದಯದಿಂದಲೇ ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ನಡೆದಿರುವ ಘಟನೆ ಎಲ್ಲರಿಗೂ ತೀವ್ರ ದುಃಖ ತಂದಿದೆ. ಸಂತ್ರಸ್ತ ಕುಟುಂಬಗಳ ದುಃಖವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಇಡೀ ದೇಶ ಅವರೊಂದಿಗೆ ನಿಂತಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾರು ಬಾಂಬ್‌ ಸ್ಫೋಟದ ಹಿಂದೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದರ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ. ಇದಕ್ಕೆಲ್ಲಾ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!