ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಖರ ಕಾರು ಸ್ಫೋಟದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಪೋಟದ ಹಿಂದೆ ಇರುವವರನ್ನು ಸುಮ್ಮನೆ ಬಿಡಲ್ಲ. ಕಟಕಟೆಗೆ ತಂದು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ | ರಾಜ್ಯದಲ್ಲೂ ಅಲರ್ಟ್ ಘೋಷಣೆ ; ಸಿಎಂ
ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನಾನು ತುಂಬಾ ಭಾರವಾದ ಹೃದಯದಿಂದಲೇ ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ನಡೆದಿರುವ ಘಟನೆ ಎಲ್ಲರಿಗೂ ತೀವ್ರ ದುಃಖ ತಂದಿದೆ. ಸಂತ್ರಸ್ತ ಕುಟುಂಬಗಳ ದುಃಖವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಇಡೀ ದೇಶ ಅವರೊಂದಿಗೆ ನಿಂತಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾರು ಬಾಂಬ್ ಸ್ಫೋಟದ ಹಿಂದೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದರ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ. ಇದಕ್ಕೆಲ್ಲಾ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…