Mysore
20
broken clouds

Social Media

ಸೋಮವಾರ, 26 ಜನವರಿ 2026
Light
Dark

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ ನಡುಗಿಸಿದೆ. ಈ ಪ್ರಬಲ ಕಂಪನದ ಬೆನ್ನಲ್ಲೇ ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ಕೊಟ್ಟಿದೆ. ಸುಮಾರು ಮೂರು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಯುಎಸ್‌ಜಿಎಸ್ ಮಾಹಿತಿಯ ಪ್ರಕಾರ, ಭೂಕಂಪದ ತೀವ್ರತೆಯಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಸುಮಾರು ೩ ಮೀಟರ್ (೧೦ ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.

ಇದನ್ನು ಓದಿ: ಕೆ.ಆರ್‌.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು

೧೧:೧೫ ರ ಸುಮಾರಿಗೆ ಭೂಕಂಪನ
ಜಪಾನ್‌ನ ಉತ್ತರ ಮತ್ತು ಪೂರ್ವ ಭಾಗದ ಕರಾವಳಿ ಪ್ರದೇಶದಲ್ಲಿ ಸ್ಥಳೀಯ ಕಾಲಮಾನ ರಾತ್ರಿ ೧೧:೧೫ ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಈ ಹಿನ್ನೆಲೆ, ಹೊಕ್ಕೆ ಡೊ, ಅಯೋಮೊರಿ ಮತ್ತು ಇವಾಟೆ ಪ್ರಿಫೆಕ್ಚರ್‌ಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಭೂಕಂಪದ ತೀವ್ರತೆಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಭೂಕಂಪನದ ತೀವ್ರತೆ ಎಷ್ಟಿದೆ ಎನ್ನುವುದು ಕಂಡುಬಂದಿದೆ. ಎರೆಡರಡು ಭಾಗದಲ್ಲಿ ಸಂಭವಿಸಿದ ಕಂಪನದಿಂದ ದೀಪಗಳು, ವಾಹನಗಳು, ಬೆಂಚು ಕುರ್ಚಿಗಳು ಮನೆಯಲ್ಲಿನ ಅಮೂಲ್ಯ ವಸ್ತುಗಳು ಜೋರಾಗಿ ಅಲುಗಾಡುವುದು ಕಂಡುಬಂದಿದೆ. ಜೊತೆಗೆ ಸ್ಥಳೀಯ ಜನರು ಕಿರುಚಾಡುವುದು ವಿಡಿಯೋದಲ್ಲಿ. ಈ ಬಗ್ಗೆ ವ್ಯಕ್ತಿಯೊಬ್ಬರು ವಿದೇಶಿ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದು, ಭೂಕಂಪವು ಒಂದು ನಿಮಿಷಕ್ಕೂ ಹೆಚ್ಚು ಕಾಲ ಮುಂದುವರಿಯಿತು ಎಂದು ಹೇಳಿದ್ದಾರೆ.

Tags:
error: Content is protected !!