ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ ನಡುಗಿಸಿದೆ. ಈ ಪ್ರಬಲ ಕಂಪನದ ಬೆನ್ನಲ್ಲೇ ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ಕೊಟ್ಟಿದೆ. ಸುಮಾರು ಮೂರು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಯುಎಸ್‌ಜಿಎಸ್ ಮಾಹಿತಿಯ ಪ್ರಕಾರ, ಭೂಕಂಪದ ತೀವ್ರತೆಯಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಸುಮಾರು ೩ ಮೀಟರ್ (೧೦ ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.
ಇದನ್ನು ಓದಿ: ಕೆ.ಆರ್.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು
೧೧:೧೫ ರ ಸುಮಾರಿಗೆ ಭೂಕಂಪನ
ಜಪಾನ್‌ನ ಉತ್ತರ ಮತ್ತು ಪೂರ್ವ ಭಾಗದ ಕರಾವಳಿ ಪ್ರದೇಶದಲ್ಲಿ ಸ್ಥಳೀಯ ಕಾಲಮಾನ ರಾತ್ರಿ ೧೧:೧೫ ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಈ ಹಿನ್ನೆಲೆ, ಹೊಕ್ಕೆ ಡೊ, ಅಯೋಮೊರಿ ಮತ್ತು ಇವಾಟೆ ಪ್ರಿಫೆಕ್ಚರ್‌ಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಭೂಕಂಪದ ತೀವ್ರತೆಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಭೂಕಂಪನದ ತೀವ್ರತೆ ಎಷ್ಟಿದೆ ಎನ್ನುವುದು ಕಂಡುಬಂದಿದೆ. ಎರೆಡರಡು ಭಾಗದಲ್ಲಿ ಸಂಭವಿಸಿದ ಕಂಪನದಿಂದ ದೀಪಗಳು, ವಾಹನಗಳು, ಬೆಂಚು ಕುರ್ಚಿಗಳು ಮನೆಯಲ್ಲಿನ ಅಮೂಲ್ಯ ವಸ್ತುಗಳು ಜೋರಾಗಿ ಅಲುಗಾಡುವುದು ಕಂಡುಬಂದಿದೆ. ಜೊತೆಗೆ ಸ್ಥಳೀಯ ಜನರು ಕಿರುಚಾಡುವುದು ವಿಡಿಯೋದಲ್ಲಿ. ಈ ಬಗ್ಗೆ ವ್ಯಕ್ತಿಯೊಬ್ಬರು ವಿದೇಶಿ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದು, ಭೂಕಂಪವು ಒಂದು ನಿಮಿಷಕ್ಕೂ ಹೆಚ್ಚು ಕಾಲ ಮುಂದುವರಿಯಿತು ಎಂದು ಹೇಳಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…