Strong earthquake in Delhi: People shocked
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್‌ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ದಿಲ್ಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್‌ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.
ಹರಿಯಾಣದ ಜಿಂದ್ ಮತ್ತು ಬಹದ್ದೂರ್‌ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು. ಕಳೆದ ಆರು ತಿಂಗಳಲ್ಲಿ ದಿಲ್ಲಿ ಮತ್ತು ಎನ್‌ಸಿಆರ್‌ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.
ಭೂಕಂಪನದ ಜೊತೆಗೆ ದಿಲ್ಲಿ ಮತ್ತು ಎನ್‌ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್‌ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…