Mysore
24
mist

Social Media

ಶುಕ್ರವಾರ, 14 ನವೆಂಬರ್ 2025
Light
Dark

ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ: ಸಿಎಂ ಓಮರ್‌ ಅಬ್ದುಲ್ಲಾ ಎಚ್ಚರಿಕೆ

ಶ್ರೀನಗರ: ಜಮ್ಮ-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಎಂ ಓಮರ್‌ ಅಬ್ದುಲ್ಲಾ ತಿಳಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಿಎಂ ಓಮರ್‌ ಅಬ್ದುಲ್ಲಾ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.

ಕಳೆದ 2019ರ ಆಗಸ್ಟ್.‌5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿತು.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ರಾಜ್ಯ ಸ್ಥಾನವನ್ನು ಮರುಸ್ಥಾಪಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.

ಎರಡೂ ಚುನಾವಣೆಗಳಲ್ಲೂ ಜನರು ಯಾವುದೇ ಭಯವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಚುನಾವಣೆಗಳನ್ನು ಮುಗಿಸಿ ವಿರಾಮವಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಮಾತನಾಡುತ್ತೇನೆ. ಇದರಿಂದ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ತರಲಾಗುವುದು ಎಂಬ ವಿಶ್ವಾಸ ನನಗಿದೆ ಎಂದರು.

 

Tags:
error: Content is protected !!