ಶ್ರೀನಗರ: ಜಮ್ಮ-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಎಂ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಿಎಂ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಾಗಿದೆ ಎಂದರು.
ಕಳೆದ 2019ರ ಆಗಸ್ಟ್.5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿತು.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ರಾಜ್ಯ ಸ್ಥಾನವನ್ನು ಮರುಸ್ಥಾಪಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.
ಎರಡೂ ಚುನಾವಣೆಗಳಲ್ಲೂ ಜನರು ಯಾವುದೇ ಭಯವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಚುನಾವಣೆಗಳನ್ನು ಮುಗಿಸಿ ವಿರಾಮವಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಮಾತನಾಡುತ್ತೇನೆ. ಇದರಿಂದ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ತರಲಾಗುವುದು ಎಂಬ ವಿಶ್ವಾಸ ನನಗಿದೆ ಎಂದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…