ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖ್ಯಸ್ಥ ಸುಬೋದ್ ಕುಮಾರ್ ತಳ್ಳಿಹಾಕಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ ಮಾಡಿದ್ದು, ನೀಟ್ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ಮಾಡಿದ್ದು, ವೈದ್ಯಕೀಯ ಪರೀಕ್ಷೆಯ ಸಮಗ್ರತೆಗೆ ದೇಶದಲ್ಲಿ ಎಲ್ಲಿಯೂ ರಾಜೀಯಾಗಿಲ್ಲ ಎಂದು ಅವರು ಹೇಳಿದರು.
ಈ ಸಂಬಂದ ಪಿಐಬಿ ಟ್ವೀಟ್ ಮಾಡಿದ್ದು, ನೀಟ್ ಪರೀಕ್ಷೆಯ ವಿಷಯವು 6 ಕೇಂದ್ರಗಳು ಮತ್ತು 1600 ಅಭ್ಯರ್ಥಿಗಳಿಗೆ ಸಂಬಂಧಿಸಿದೆ. ನಾವು ತಜ್ಞರ ಸಮಿತಿಯನ್ನು ರಚಿಸಿ, ಸಮಸ್ಯೆಯನ್ನು ವಿಶ್ಲೇಷಿಸಿದ್ದೇವೆ ಮತ್ತು ಕುಂದುಕೊರತೆಗಳನ್ನು ಪರಿಹರಿಸಿದ್ದೇವೆ
ವಿಶೇಷವಾಗಿ 1600 ಅಭ್ಯರ್ಥಿಗಳು ಮತ್ತು ಇತರ 23 ಲಕ್ಷ ಅಭ್ಯರ್ಥಿಗಳ ಭಯವನ್ನು ಹೋಗಲಾಡಿಸಲು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಉನ್ನತ ಅಧಿಕಾರದ ಸಮಿತಿಯು ಕುಂದುಕೊರತೆ ಪರಿಹಾರ ಸಮಿತಿಯ ಶಿಫಾರಸುಗಳನ್ನು ವಿಶ್ಲೇಷಿಸಲು ನಿರ್ಧರಿಸಿದೆ. ಆ ಮೂಲಕ, ಎಲ್ಲಾ ಸಮಸ್ಯೆಗಳನ್ನು ಮತ್ತೊಮ್ಮೆ ಪರಿಹರಿಸಲು ಮುಂದಾಗಿದ್ದೇವೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮಹಾನಿರ್ದೇಶಕರಾದ ಸುಬೋಧ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂದು ಬರೆದುಕೊಂಡಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…