ಹೊಸದಿಲ್ಲಿ : ಭಾರತದ ಗಗನಯಾನಿ ಶುಭಾಂಶು ಶುಕ್ಲಾ, ಹಂಗರಿ, ಪೋಲೆಂಡ್‌ನ ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಂ-4 ಅಂತರಿಕ್ಷ ಡ್ರ್ಯಾಗನ್ ಯಶಸ್ವಿಯಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ತಲುಪಿದೆ.
ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಫಾಲ್ಕನ್-9 ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ ಮಧ್ಯಾಹ್ನ 12.01ಕ್ಕೆ ಯಶಸ್ವಿಯಾಗಿ ಚಿಮ್ಮಿತ್ತು. ಅದು ಸುಮಾರು 48 ಗಂಟೆಗಳ ಬಳಿಕ(ಇಂದು ಸಂಜೆ 4) ಗಂಟೆಗೆ ಐಎಸ್‌ಎಸ್‌ನೊಂದಿಗೆ ಜೋಡಣೆಯಾಗಿದೆ(ಡಾಕಿಂಗ್) ಎಂದು ವರದಿಯಾಗಿದೆ.
ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸಲು ನಾಲ್ವರು ಗಗನಯಾತ್ರಿಗಳು ಐಎಸ್‌ಎಸ್ ನಲ್ಲಿ ಹದಿನಾಲ್ಕು ದಿನಗಳನ್ನು ಕಳೆಯಲಿದ್ದಾರೆ.




