ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ ಹೆಚ್ಚುವರಿಯಾಗಿ ಶೇ.20ರ ಹಂಚಿಕೆಯನ್ನು ಮಂಜೂರು ಮಾಡಿದೆ ಎಂದು ತಿಳಿಸಿದೆ.
ಇನ್ನೂ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ, ದೇಶದಲ್ಲಿ ಪ್ರಸ್ತುತ ಸೂಕ್ತ ರೀತಿಯಲ್ಲಿ ಕಚ್ಚಾ ತೈಲ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಎರಡೂ ಮೂರು ತಿಂಗಳಿಗೆ ಆಗುವಷ್ಟು ಇಂಧನ ದಾಸ್ತಾನು ಇದೆ. ಜತೆಗೆ ದೇಶೀಯ ಎಲ್‌ಪಿಜಿ ಉತ್ಪಾದನೆಯು ಸಹ ಹೆಚ್ಚಾಗಿದೆ ಎಂದಿದ್ದಾರೆ.
ಪಶ್ಚಿಮ ಸಂಘರ್ಷದದಿಂದ ಉಂಟಾಗಿರುವ ಪರಿಣಾಮವನ್ನು ಪ್ರಸ್ತಾಪಿಸಿದ ಅವರು, ಕಚ್ಚಾತೈಲ, ಎಲ್‌ಪಿಜಿ ಮತ್ತು ಎಲ್‌ಎನ್‌ಜಿ ಪೂರೈಕೆಗಳ ಮೇಲೆ ಪರಿಣಾಮ ಬೀರಿದೆ. ಜತೆಗೆ ಜಾಗತಿಕ ಬೆಲೆಯಲ್ಲಿ ಹೆಚ್ಚಳವು ಆಗಿದೆ ಎಂದರು.
ಭಾರತ ಶೇ.90 ರಷ್ಟು ಎಲ್‌ಪಿಜಿಯನ್ನು ಹಾರ್ಮುಜ್ ಜಲಸಂಧಿಯ ಮೂಲಕ ಆಮದು ಮಾಡಿಕೊಳ್ಳುತ್ತದೆ. ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿತ್ತು. ಬಳಿಕ ಹಂತ ಹಂತವಾಗಿ ಮರು ಸ್ಥಾಪಿಸಲಾಯಿತು. ಕ್ರಮೇಣ ಸರಬರಾಜನ್ನು ಶೇ.20 ರಿಂದ ಶೇ.70ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…