ದೇಶ- ವಿದೇಶ

ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ: ಸುನಿತಾ ವಿಲಿಯಮ್ಸ್‌

ಫ್ಲೋರಿಡಾ: ಬಾಹ್ಯಾಕಾಶದಲ್ಲಿ ಸುದೀರ್ಘವಾಗಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ಹಿಂತಿರುಗಿದ ಭಾರತೀಯ ಮೂಲದ ಮೊದಲ ಮಹಿಳಾ ಗಗನಯಾತ್ರಿಯಾಗಿ ಸುನಿತಾ ವಿಲಯಮ್ಸ್‌ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶದಲ್ಲಿ ತಮ್ಮ ನಡಿಗೆಯನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಬಾಹ್ಯಾಕಾಶ ನಡಿಗೆ ಪೂರೈಸಿದ ಗಗಯಾತ್ರಿಗಳ ಸಾರ್ವಕಾಲಿಕ ದಾಖಲೆ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

2024ರ ಜೂನ್ 6ರಂದು ಸುನಿತಾ ಹಾಗೂ ವಿಲ್ಮೋರ್ ಅವರು 8 ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಬಾಹ್ಯಾಕಾಶದಲ್ಲಿ ನೌಕೆಯ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ ಭೂಮಿಗೆ ಹಿಂದಿರುಗಲು ಸಾಧ್ಯವಾಗಿರಲಿಲ್ಲ.

ಈ ಕಾರಣಕ್ಕೆ ಅವರು ಬಾಹ್ಯಾಕಾಶದಲ್ಲಿ 286 ದಿನಗಳು ಕಳೆಯಬೇಕಾಯಿತು. ಆದರೆ ಇಂದು ಭಾರತ ಸಮಯದ ಪ್ರಕಾರ ಮಧ್ಯರಾತ್ರಿ 3.37ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ರಾಕೆಟ್‌ನ ಮೂಲಕ ಲ್ಯಾಂಡ್‌ ಆಗಿದ್ದಾರೆ. ಇನ್ನು ಸುನಿತಾ ಅವರು ಬಾಹ್ಯಾಕಾಶ ಕೇಂದ್ರದಲ್ಲಿ ಸುದೀರ್ಘ ವಾಸ ಮಾಡಿದ ವಿಶ್ವದ 2ನೇ ಗಗನಯಾತ್ರಿ ಆಗಿದ್ದಾರೆ. ಅಲ್ಲದೇ ಸುನಿತಾ ಅವರು ಒಟ್ಟಾರೆ 608 ದಿನಗಳನ್ನು ಬಾಹ್ಯಾಕಾಶ ಕೇಂದ್ರದಲ್ಲಿ ಕಳೆದಿದ್ದರೆ, ಪೆಗ್ಗಿ ವಿಟ್ಸನ್‌ ಅವರು 675 ದಿನಗಳನ್ನು ಪೂರೈಸಿ ಮೊದಲ ಸ್ಥಾನದಲ್ಲಿ ಇದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

7 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

8 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

9 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

15 hours ago