ವಾಷಿಂಗ್ಟನ್: 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸುನೀತಾ ವಿಲಿಯಮ್ಸ್ ಅವರು, ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ. ಮುಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲಾ ಅದ್ಭುತ ಚಿತ್ರಗಳು ಸಿಕ್ಕಿವೆ. ಗುಜರಾತ್ ಹಾಗೂ ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ತಿಳಿಸಿದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…