ಚೆನ್ನೈ: ದಿಢೀರ್ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆಸ್ಪತ್ರೆ ವೈದ್ಯರು, ರಜಿನಿಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ರಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರಜಿನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅವರನ್ನು ಸೆಪ್ಟೆಂಬರ್.30ರಂದು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸದ್ಯ ಆಸ್ಪತ್ರೆಯಲ್ಲಿರುವ ರಜಿನಿಕಾಂತ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಎರಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.