KRS Dam
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕಾವೇರಿ ನೀರು ಹಂಚಿಕೆ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, CWMA ಆದೇಶವನ್ನು ಪಾಲಿಸಬೇಕು ಎಂದು ಸೂಚಿಸಿದೆ.
ಇದೇ ವೇಳೆ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್.12ಕ್ಕೆ ಮುಂದೂಡಲಾಗಿದೆ.
ಸುಪ್ರೀಂಕೋರ್ಟ್ ಸೂಚನೆಯ ಬೆನ್ನಲ್ಲೇ ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಕಾವೇರಿ ನೀರು ಬಿಡುವಂತೆ ನೀಡಲಾಗುತ್ತಿರುವ ಆದೇಶಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರು, ರಾಜ್ಯದ ಜಲಾಶಯಗಳ ನೀರಿನ ಮಟ್ಟ ಮತ್ತು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ಅನ್ನದಾತರ ಹೋರಾಟವೂ ಮುಂದುವರಿದಿದೆ. ಮುಂದಿನ ವಿಚಾರಣೆ ಅಕ್ಟೋಬರ್.12ರಂದು ನಡೆಯಲಿದ್ದು, ಅಂದು ಸುಪ್ರೀಂಕೋರ್ಟ್ ಯಾವ ನಿರ್ದೇಶನ ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…