Mysore
30
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ಕುರಿತು ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಸಾರ್ಜಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿರುವ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಸ್ಥೆಯೂ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಆತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಜಾ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಮನೋಜ್‌ ಮಿಶ್ರಾ ಹಾಗೂ ಜೆ.ಬಿ.ಪರ್ದಿವಾಲಾ ಅವರನ್ನು ಒಳಗೊಂಡ ಪೀಠವು ವಿಚಾರಣೆ ನಡೆಸಿ, ಈ ತರಹದ ವಿಚಾರಗಳಲ್ಲಿ ರಾಜೀನಾಮೆ ನೀಡಬೇಕು ಎಂದು ಆದೇಶಿಸಲು ನ್ಯಾಯಾಲಯಕ್ಕೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ.

ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು, ಒಂದು ರಾಜ್ಯದ ಮುಖ್ಯಮಂತ್ರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು ಇದು ರಾಜಕೀಯ ವೇದಿಕೆಯಲ್ಲ. ಅಲ್ಲದೇ ಇಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ ಎಂದು ಪೀಠ ಖಡಕ್‌ ಆಗಿ ಹೇಳಿದೆ.

Tags: