ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಸಾರ್ಜಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿರುವ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಸ್ಥೆಯೂ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಆತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಜಾ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಹಾಗೂ ಜೆ.ಬಿ.ಪರ್ದಿವಾಲಾ ಅವರನ್ನು ಒಳಗೊಂಡ ಪೀಠವು ವಿಚಾರಣೆ ನಡೆಸಿ, ಈ ತರಹದ ವಿಚಾರಗಳಲ್ಲಿ ರಾಜೀನಾಮೆ ನೀಡಬೇಕು ಎಂದು ಆದೇಶಿಸಲು ನ್ಯಾಯಾಲಯಕ್ಕೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದೆ.
ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು, ಒಂದು ರಾಜ್ಯದ ಮುಖ್ಯಮಂತ್ರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು ಇದು ರಾಜಕೀಯ ವೇದಿಕೆಯಲ್ಲ. ಅಲ್ಲದೇ ಇಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ ಎಂದು ಪೀಠ ಖಡಕ್ ಆಗಿ ಹೇಳಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…