Mysore
30
overcast clouds

Social Media

ಬುಧವಾರ, 06 ಮೇ 2026
Light
Dark

ಮಹಾಕುಂಭಮೇಳದ ಕಾಲ್ತುಳಿತ ಪ್ರಕರಣ| ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ PIL ಅರ್ಜಿ ವಜಾ: ಸುಪ್ರೀಂಕೋರ್ಟ್‌

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

ಪ್ರಯಾಗ್‌ ರಾಜ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ ವಿಶಾಲ್‌ ತಿವಾರಿ ಎಂಬುವವರು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು(ಫೆಬ್ರವರಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಅವರಿದ್ದ ದ್ವಿಸದಸ್ಯ ಪೀಠವೂ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ.

ಇನ್ನೂ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಿದ್ದು, ಪ್ರಸ್ತುತ ಈ ಅರ್ಜಿಯನ್ನು ಸುಪ್ರಿಂಕೋರ್ಟ್‌ನಲ್ಲಿ ವಿಚಾರಣೆಗೆ ಅಂಗೀಕರಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರ ವಾದವನ್ನು ನ್ಯಾಯ ಪೀಠವೂ ಪರಿಗಣಿಸಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಹಿಂದೂ ಕ್ಯಾಲೆಂಡರ್‌ನ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ವೇಳೆ ಪ್ರಯಾಗ್‌ರಾಜ್ನ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಮುಂಜಾನೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದರು. ಅಲ್ಲದೇ ಆ ಸಂದರ್ಭದಲ್ಲಿ 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Tags:
error: Content is protected !!