ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.
ಪ್ರಯಾಗ್ ರಾಜ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಎಂಬುವವರು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು(ಫೆಬ್ರವರಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವೂ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ.
ಇನ್ನೂ ಅಲಹಾಬಾದ್ ಹೈಕೋರ್ಟ್‌ನಲ್ಲಿ ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಿದ್ದು, ಪ್ರಸ್ತುತ ಈ ಅರ್ಜಿಯನ್ನು ಸುಪ್ರಿಂಕೋರ್ಟ್‌ನಲ್ಲಿ ವಿಚಾರಣೆಗೆ ಅಂಗೀಕರಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರ ವಾದವನ್ನು ನ್ಯಾಯ ಪೀಠವೂ ಪರಿಗಣಿಸಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಹಿಂದೂ ಕ್ಯಾಲೆಂಡರ್‌ನ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ವೇಳೆ ಪ್ರಯಾಗ್‌ರಾಜ್ನ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಮುಂಜಾನೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದರು. ಅಲ್ಲದೇ ಆ ಸಂದರ್ಭದಲ್ಲಿ 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…