ನವದೆಹಲಿ : ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆಕೆಯ ವಿರುದ್ಧ ದೇಶದೆಲ್ಲೆಡೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಿ ಒಂದೇ ಎಫ್‌ಐಆರ್ ಆಗಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದರೆ, ಎಫ್‌ಐಆರ್ ರದ್ದು ಮಾಡುವ ಅವರ ಬೇಡಿಕೆಯನ್ನು ನಾವು ಪರಿಶೀಲನೆ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ಅವರು ಹೈಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶ ನೀಡಿದೆ. ಆಕೆಯ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಿ ದೆಹಲಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಜುಲೈ 1 ರಂದು ನಡೆದ ವಿಚಾರಣೆಯಲ್ಲಿ,ಸುಪ್ರಿಂಕೋರ್ಟ್‌ನ ಇಬ್ಬರು ನ್ಯಾಯಾಧೀಶರು ಶರ್ಮಾ ಅವರು ಸುದ್ದಿ ವಾಹಿನಿಯ ಚರ್ಚೆಯ ಸಂದರ್ಭದಲ್ಲಿ ಪ್ರವಾದಿಯವರ ಕುರಿತು ಮಾಡಿದ ಕಾಮೆಂಟ್ ನಂತರ ಭುಗಿಲೆದ್ದ ಹಿಂಸಾಚಾರಕ್ಕೆ “ಅವರೊಬ್ಬರೇ ಹೊಣೆಗಾರರು” ಎಂದು ಹೇಳಿದ್ದರು.
ಶರ್ಮಾ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಒಟ್ಟಿಗೆ ಸೇರಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಪೊಲೀಸರು ಅಮಿತ್ ಶಾ ನೇತೃತ್ವದ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಬೇಕಿದೆ.
ಜುಲೈ 1ರ ವಿಚಾರಣೆಯ ಸಂದರ್ಭದಲ್ಲಿ ಶರ್ಮಾ ಅವರು ದೇಶಾದ್ಯಂತ ತನ್ನ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ನ್ಯಾಯಾಲಯದ ವಿಚಾರಣೆಗಾಗಿ ಪ್ರತಿ ರಾಜ್ಯಕ್ಕೆ ಹೋಗುವುದರಿಂದ ತನಗೆ ಮತ್ತು ಕುಟುಂಬಕ್ಕೆ ಭದ್ರತಾ ಬೆದರಿಕೆ ಎದುರಿಸಬೇಕಾಗುತ್ತದೆ ಎಂದಿದ್ದರು.
ಪ್ರವಾದಿಯ ಬಗ್ಗೆ ಅವರು ಮಾಡಿದ ಹೇಳಿಕೆ ಮೇಲೆ ಶರ್ಮಾ ವಿರುದ್ಧದ ಒಂಬತ್ತು ಪ್ರಕರಣಗಳಲ್ಲಿ ಅವರನ್ನು ಬಂಧಿಸಲಾಗುವುದಿಲ್ಲ ಜುಲೈ 19 ರಂದು ಸುಪ್ರೀಂಕೋರ್ಟ್ ಹೇಳಿತ್ತು. ಜುಲೈ 1ರ ಆದೇಶದ ನಂತರ, ಅಜ್ಮೀರ್ ದರ್ಗಾದ ಉದ್ಯೋಗಿಯೊಬ್ಬರು ಕತ್ತು ಸೀಳುವುದಾಗಿ ವಿಡಿಯೊದಲ್ಲಿ ಬೆದರಿಕೆ ಹಾಕಿದ್ದಾರೆ. ಉತ್ತರ ಪ್ರದೇಶದ ಮತ್ತೊಬ್ಬ ನಿವಾಸಿ ತನ್ನನ್ನು ನಿಂದಿಸಿ ತನ್ನ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿರುವ ಉದಾಹರಣೆಗಳಿವೆ ಎಂದು ಶರ್ಮಾ ನ್ಯಾಯಾಲಯದಲ್ಲಿ ಹೇಳಿದ್ದರು
ನೂಪುರ್ ಶರ್ಮಾ ವಿರುದ್ಧ ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನಲ್ಲಿ ಪ್ರಕರಣಗಳು ದಾಖಲಾಗಿವೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…