ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ.ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಇದನ್ನು ಓದಿ: ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು
ಏನಿದು ಪ್ರಕರಣ?: ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಸಿದ್ದರಾಮಯ್ಯ ಗೆದ್ದಿದ್ದಾರೆ. ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್ ಆಗ್ರಹಿಸಿದ್ದರು. ಇದೇ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲನ್ನು ಕೂಡ ಏರಿದ್ದರು. ಹೈಕೋರ್ಟ್ ಶಂಕರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಶಂಕರ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.




