ದೇಶ- ವಿದೇಶ

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್‌ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ.ವಿಕ್ರಮನಾಥ್‌ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.

ಇದನ್ನು ಓದಿ: ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ಏನಿದು ಪ್ರಕರಣ?: ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ ಸಿದ್ದರಾಮಯ್ಯ ಗೆದ್ದಿದ್ದಾರೆ. ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್‌ ಆಗ್ರಹಿಸಿದ್ದರು. ಇದೇ ವಿಚಾರವಾಗಿ ಹೈಕೋರ್ಟ್‌ ಮೆಟ್ಟಿಲನ್ನು ಕೂಡ ಏರಿದ್ದರು. ಹೈಕೋರ್ಟ್‌ ಶಂಕರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಶಂಕರ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago