ನವದೆಹಲಿ: ಕರ್ನಾಟಕದಲ್ಲಿ ಥಗ್‌ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ನಟ ಕಮಲ್ ಹಾಸನ್ ಅಭಿನಯದ ಥಗ್‌ಲೈಫ್ ಸಿನಿಮಾ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಇಂದು ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಬೆದರಿಕೆ ಹಾಕಿದ್ದ ಗುಂಪುಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಚಿತ್ರ ಬಿಡುಗಡೆಗೆ ಬೆದರಿಸುವುದು, ಅಡ್ಡಿ ಮಾಡುವುದು ಸರಿಯಲ್ಲ. ನಿಮಗೆ ಇಷ್ಟ ಇಲ್ಲ ಅಂದರೆ ಸಿನಿಮಾ ನೋಡಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಕಮಲ್ ಹಾಸನ್‌ಗೆ ಈಗ ಬಿಗ್ ರಿಲೀಫ್ ಸಿಕ್ಕಿದಂತಾಗಿದ್ದು, ಯಾವ ದಿನದಂದು ಕರ್ನಾಟಕದಲ್ಲಿ ಥಗ್‌ಲೈಫ್ ಚಿತ್ರ ಬಿಡುಗಡೆಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.





