ಹೊಸದಿಲ್ಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಇಂದು ( ಸೆಪ್ಟೆಂಬರ್ 13) ಜಾಮೀನು ಮಂಜೂರು ಮಾಡಿದೆ.

ಜಾಮೀನು ನಿರಾಕರಣೆ ಹಾಗೂ ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 10 ಲಕ್ಷ ರೂಪಾಯಿ ಜಾಮೀನು ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳ ಆಧಾರದ ಮೇಲೆ ಜಾಮೀನು ನೀಡಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಸುಪ್ರೀಂ ಸೂಚನೆ ನೀಡಿದೆ.





