ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ
ವಾದ-ವಿವಾದವನ್ನು ಆಲಿಸಿ ಕಳೆದ ಏಪ್ರಿಲ್.4ರಂದು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಪ್ರಕಟಿಸಿತು.
ನ್ಯಾಯಾಲಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.ಯದ ಆದೇಶದಿಂದಾಗಿ ಸದ್ಯ ಯಡಿಯೂರಪ್ಪಗೆ ಮುಂದಿನ ವಿಚಾರಣೆವರೆಗೂ ರಿಲೀಫ್ ಸಿಕ್ಕಂತಾಗಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಮುಂದಿನ ಅರ್ಜಿ ವಿಚಾರಣೆ ನಡೆಯಲಿದೆ.
ಯಡಿಯೂರಪ್ಪ ವಿರುದ್ಧ ನೀಡಿರುವ ದೂರನ್ನು ಮರುಪರಿಶೀಲಿಸುವಂತೆ ಬೆಂಗಳೂರಿನ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ 2021ರ ಜನವರಿ.5ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.




