ನವದೆಹಲಿ: ಸುಪ್ರೀಂ ಕೋರ್ಟ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.
ಹ್ಯಾಕ್ ಸಂಬಂಧ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಿದ್ದು, ತಂಡವು ಪರಿಶೀಲಿಸುತ್ತಿದೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಚಾನೆಲ್ಅನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ. ಈ ಕುರಿತು ಬ್ಯಾಕ್‍ಎಂಡ್ ಟೀಮ್ ಕಾರ್ಯಪ್ರವೃತ್ತರಾಗಿದ್ದು, ಶೀಘ್ರದಲ್ಲೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ಎಂದಿನಂತೆ ಯೂಟ್ಯೂಬ್ ಚಾನೆಲ್ ಕಾರ್ಯಪ್ರವೃತ್ತಗೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂ ಕೋರ್ಟ್ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿದೆ. ಇತ್ತೀಚೆಗೆ ಕೋಲ್ಕತಾ ಆರ್‍ಜಿ ಕಾರ್ ಆಸ್ಪತ್ರೆ ಪ್ರಕರಣದ ವಿಚಾರಣೆಯನ್ನು ನೇರ ಪ್ರಸಾರ ಮಾಡಿತ್ತು. ಇನ್ನು ಇತರ ವಿಚಾರಣೆಗಳ ವಿಡಿಯೋಗಳು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್‍ನಲ್ಲಿ ಲಭ್ಯವಿದೆ. ಆದರೆ ಖದೀಮರು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ್ದಾರೆ. ಬಳಿಕ ಅಮೆರಿಕದ ಮೂಲದ ರಿಪ್ಪಲ್ ಲ್ಯಾಬ್ಸ್ ಜಾಹೀರಾತು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಈ ಪೈಕಿ ಕ್ರಿಪ್ಟೋಕರೆನ್ಸಿ, ಎಕ್ಸ್‍ಆರ್‍ಪಿ ಸೇರಿದಂತೆ ಇತರ ಕೆಲ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…