Mysore
21
scattered clouds

Social Media

ಭಾನುವಾರ, 16 ಮಾರ್ಚ್ 2025
Light
Dark

ತ್ರಿವಳಿ ತಲಾಖ್‌| ಕೇಂದ್ರ ಸರ್ಕಾರಕ್ಕೆ ಎಫ್‌ಐಆರ್‌, ಚಾರ್ಜ್‌ಶೀಟ್‌ ಮಾಹಿತಿ ನೀಡಿ: ಸುಪ್ರೀಂಕೋರ್ಟ್ ಆದೇಶ

ನವದೆಹಲಿ: ಕೇಂದ್ರ ಸರ್ಕಾರಕ್ಕೆ, 1991ರ ಮುಸ್ಲಿಂ ಮಹಿಳೆಯರ ಮದುವೆ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಉಲ್ಲಂಘಿಸಿ, ಸಂಗಾತಿಗೆ ತ್ವರಿತ ವಿಚ್ಛೇದನ ನೀಡಲು ತ್ರಿವಳಿ ತಲಾಖ್‌ ಹೇಳಿದ್ದ ಪುರುಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಚಾರ್ಜ್‌ಶೀಟ್‌ಗಳ ಸಂಖ್ಯೆಯ ವಿವರಗಳನ್ನು ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್‌ ಆದೇಶಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.29) 1991ರ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ 12 ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಅವರಿದ್ದ ದ್ವಿಸದಸ್ಯ ಪೀಠವೂ ಅರ್ಜಿಗಳಿಗೆ ತಮ್ಮ ಲಿಖಿತ ಸಲ್ಲಿಕೆಗಳನ್ನು ನೀಡುವಂತೆ ಕೇಂದ್ರ ಸರ್ಕಾರಕಕ್ಕೆ ಮತ್ತು ಇತರರಿಗೆ ಆದೇಶ ಹೊರಡಿಸಿದೆ.

ಇನ್ನೂ ಮಾರ್ಚ್‌.17ರಿಂದ ಆರಂಭವಾಗುವ ವಾರದಲ್ಲಿ ಈ ಎಲ್ಲಾ ಅರ್ಜಿಗಳ ಅಂತಿಮ ವಿಚಾರಣೆಯನ್ನು ನಡೆಸಲಾಗುವುದು. ಅಲ್ಲದೇ ಕಾನೂನಿನ ಅಡಿಯಲ್ಲಿ ತ್ವರಿತ ತ್ರಿವಳಿ ತಲಾಖ್‌ ಅನ್ನು ಕಾನೂನು ಬಾಹಿರ ಹಾಗೂ ಅಸಿಂಧು ಎಂದು ಘೋಷಿಸಲಾಗಿದೆ. ಅದರ ಅನ್ವಯ ವಿಚ್ಛೇದನ ನೀಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಹೇಳಿದೆ.

Tags: