ನವದೆಹಲಿ: ಕೇಂದ್ರ ಸರ್ಕಾರಕ್ಕೆ, 1991ರ ಮುಸ್ಲಿಂ ಮಹಿಳೆಯರ ಮದುವೆ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಉಲ್ಲಂಘಿಸಿ, ಸಂಗಾತಿಗೆ ತ್ವರಿತ ವಿಚ್ಛೇದನ ನೀಡಲು ತ್ರಿವಳಿ ತಲಾಖ್ ಹೇಳಿದ್ದ ಪುರುಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್‌ಗಳ ಸಂಖ್ಯೆಯ ವಿವರಗಳನ್ನು ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.29) 1991ರ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ 12 ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವೂ ಅರ್ಜಿಗಳಿಗೆ ತಮ್ಮ ಲಿಖಿತ ಸಲ್ಲಿಕೆಗಳನ್ನು ನೀಡುವಂತೆ ಕೇಂದ್ರ ಸರ್ಕಾರಕಕ್ಕೆ ಮತ್ತು ಇತರರಿಗೆ ಆದೇಶ ಹೊರಡಿಸಿದೆ.
ಇನ್ನೂ ಮಾರ್ಚ್.17ರಿಂದ ಆರಂಭವಾಗುವ ವಾರದಲ್ಲಿ ಈ ಎಲ್ಲಾ ಅರ್ಜಿಗಳ ಅಂತಿಮ ವಿಚಾರಣೆಯನ್ನು ನಡೆಸಲಾಗುವುದು. ಅಲ್ಲದೇ ಕಾನೂನಿನ ಅಡಿಯಲ್ಲಿ ತ್ವರಿತ ತ್ರಿವಳಿ ತಲಾಖ್ ಅನ್ನು ಕಾನೂನು ಬಾಹಿರ ಹಾಗೂ ಅಸಿಂಧು ಎಂದು ಘೋಷಿಸಲಾಗಿದೆ. ಅದರ ಅನ್ವಯ ವಿಚ್ಛೇದನ ನೀಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಹೇಳಿದೆ.
ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ. ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ…
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…