Mysore
17
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಕರೂರು ಕಾಲ್ತುಳಿತ ದುರಂತ ಪ್ರಕರಣ ಸಿಬಿಐ ತನಿಖೆಗೆ: ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ತಮಿಳುನಾಡಿನ ಕರೂರು ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಕರೂರು ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಹೇಳಿದ ಸುಪ್ರೀಂಕೋರ್ಟ್‌ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ.

ಇದನ್ನು ಓದಿ: ಕರೂರು ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆಗೆ ಮದ್ರಾಸ್‌ ಹೈಕೋರ್ಟ್‌ ನಕಾರ

ಸೆಪ್ಟೆಂಬರ್.‌27ರಂದು ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್‌ ಅವರ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ ಘಟನೆಯ ಬಗ್ಗೆ ಸುಪ್ರೀಂಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿದೆ.

ದುರಂತದ ಬಗ್ಗೆ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂಕೋರ್ಟ್‌ ಮಾಜಿ ನ್ಯಾಯಾಧೀಶರಾದ ಅಜಯ್‌ ರಸ್ತೋಗಿ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಎನ್‌.ವಿ.ಅಂಜಾರಿಯಾ ಅವರ ಪೀಠವು ಆದೇಶಿಸಿದೆ.

Tags:
error: Content is protected !!