ನವದೆಹಲಿ: ತಮಿಳುನಾಡಿನ ಕರೂರು ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಕರೂರು ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಹೇಳಿದ ಸುಪ್ರೀಂಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ.
ಇದನ್ನು ಓದಿ: ಕರೂರು ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆಗೆ ಮದ್ರಾಸ್ ಹೈಕೋರ್ಟ್ ನಕಾರ
ಸೆಪ್ಟೆಂಬರ್.27ರಂದು ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಅವರ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ ಘಟನೆಯ ಬಗ್ಗೆ ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ.
ದುರಂತದ ಬಗ್ಗೆ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶರಾದ ಅಜಯ್ ರಸ್ತೋಗಿ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಎನ್.ವಿ.ಅಂಜಾರಿಯಾ ಅವರ ಪೀಠವು ಆದೇಶಿಸಿದೆ.
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…