ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ಸಂಪೂರ್ಣವಾಗಿ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಆದರೆ, ಕೆಲ ಅಂಶಗಳ ಬದಲಾವಣೆಗೆ ಸೂಚಿಸಲಾಗಿದೆ. ಸಂಪೂರ್ಣ ಕಾನೂನಿಗೆ ತಡೆ ನೀಡಲು ಯಾವುದೇ ಆಧಾರವಿಲ್ಲ. ಕೆಲವು ವಿಭಾಗಗಳ ಬಗ್ಗೆ ವಿವಾದವಿದೆ. ನ್ಯಾಯಾಲಯವು ಇದರ ಬಗ್ಗೆ ಮತ್ತಷ್ಟು ವಿಚಾರಣೆ ನಡೆಸುತ್ತಿದೆ. ಸಾಧ್ಯವಾದಷ್ಟು ಮಟ್ಟಿಗೆ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಸ್ಲಿಮರಾಗಿರಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: ರಸ್ತೆ ಬದಿಯ ಗುಂಡಿಗೆ ಇಳಿದ ಟಿಪ್ಪರ್ : ತಪ್ಪಿದ ಅನಾಹುತ
ಕಾಯ್ದಿರಿಸಿದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್.ಗವಾಯಿ ಹಾಗೂ ಎ.ಜಿ.ಮಸೀಹ್ ಅವರಿದ್ದ ದ್ವಿಸದಸ್ಯ ಪೀಠವು, ಕಳೆದ ಮೇ22 ರಂದು ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿತು.
ಯಾವುದೇ ಒಬ್ಬ ವ್ಯಕ್ತಿ ವಕ್ಫ್ ಮಂಡಳಿಯ ಸದಸ್ಯರಾಗಲು ಅಥವಾ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಕನಿಷ್ಠ 5 ವರ್ಷ ಇಸ್ಲಾಂ ಧರ್ಮ ಅನುಸರಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಇದರೊಂದಿಗೆ ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ದಾಖಲೆಗಳ ನಿಬಂಧನೆಯನ್ನು ಸಹ ತಡೆಹಿಡಿಯಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆ 2025ರಲ್ಲಿ ಸೂಚಿಸಿರುವಂತೆ ಕಾನೂನು ಮೂಲಕ ಬಳಕೆ ಹಾಗೂ ಬಳಕೆ ಮೂಲಕ ಮತ್ತು ದಾಖಲೆ ಪತ್ರಗಳ ಮೂಲಕ ವಕ್ಫ್ ಎಂದು ಘೋಷಿಸುವ ಜಮೀನಿನ ಡಿನೋಟಿಫಿಕೇಶನ್ ಅಧಿಕಾರ ಯಾರದ್ದು ಎಂಬುದು ಇತ್ಯರ್ಥವಾಗಲಿದೆ ಎಂದು ತಿಳಿಸಿದೆ.





