ನವದೆಹಲಿ: ಕೊಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
ಮಂಗಳವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ʼಎಎನ್‌ಐʼ ವರದಿ ಮಾಡಿದೆ.
ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆ.9 ರಂದು ತಡರಾತ್ರಿ ಅತ್ಯಾಚಾರ ಎಸಗಿ ಅವರನ್ನು ಅಲ್ಲಿಯೇ ಕೊಲೆ ಮಾಡಲಾಗಿತ್ತು. ಇದು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಸಂಘ ಕೂಡಾ ಒಂದು ದಿನದ ಮಟ್ಟಿಗೆ ಮುಷ್ಕರ ಕೂಡಾ ನಡೆದಿತ್ತು. ಇನ್ನು ಆರ್‌ಜಿ ಕರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.






