ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಏಳು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ(ಎ1), ದರ್ಶನ್(ಎ2), ಜಗ್ಗದೀಶ್(ಎ6), ಅನುಕುಮಾರ್(ಎ7), ಆರ್.ನಾಗರಾಜು(ಎ11), ಎಂ.ಲಕ್ಷ್ಮಣ್(ಎ12) ಹಾಗೂ ಪ್ರದೋಶ್ ಎಸ್.ರಾವ್(ಎ14) ಅವರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಅನ್ವಯ ಇಂದು(ಜನವರಿ.24) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿಗಳ ವಾದವನ್ನು ಸಹ ಕೇಳಬೇಕಾಗುತ್ತದೆ. ಹೀಗಾಗಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಬೆಂಗಳೂರು ಪೊಲೀಸರು, ವಕೀಲ ಅನಿಲ್ ನಿಶಾನಿ ಮುಖಾಂತರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.