ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ ಬಾಲಕನನ್ನು ಇಸ್ಲಾಂಗೆ ಮತಾಂತರಿಸಿದ್ದ ಆರೋಪಿ ಮೌಲ್ವಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಇನ್ನೂ ಈ ವೇಳೆ ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಧೀಶರಿಗೆ ಸಿಆರ್‌ಪಿಸಿ ಸೆಕ್ಷನ್ 439 ಅಥವಾ ಬಿಎನ್‌ಎಸ್‌ಎಸ್ ಸೆಕ್ಷನ್ 483ರ ವ್ಯಾಪ್ತಿ ತಿಳಿಯದ ಕಾರಣವಾಗಿ ವಿವೇಚನೆಯನ್ನು ಹೇಗೆ ಚಲಾಯಿಸಬೇಕು ಎಂಬುದನ್ನು ವಿಚಾರಣಾ ನ್ಯಾಯಾಧೀಶರು ಅರ್ಥಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಹಲವು ಸಮ್ಮೇಳನಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಅಲ್ಲದೇ ತಮ್ಮ ವಿವೇಚನೆಯನ್ನು ಹೇಗೆ ಚಲಾಯಿಸಬೇಕೆಂಬ ಬಗ್ಗೆ ಸಮ್ಮೇಳನ ಹಾಗೂ ಉಪನ್ಯಾಸ ಕಾರ್ಯಕ್ರಮಗಳಿಗೆ ಹಾಜರಾಗಿದ್ದರೂ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ತಿರಸ್ಕರಿಸಲು ತಮ್ಮ ವಿವೇಚನೆಯನ್ನು ಹೆಚ್ಚಾಗಿ ಬಳಸುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.