ದೇಶ- ವಿದೇಶ

ಅಕ್ರಮ ಮತಾಂತರ| ಕೊಲೆ, ಅತ್ಯಾಚಾರದಷ್ಟು ಗಂಭೀರ ಅಪರಾಧವಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್‌.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ ಬಾಲಕನನ್ನು ಇಸ್ಲಾಂಗೆ ಮತಾಂತರಿಸಿದ್ದ ಆರೋಪಿ ಮೌಲ್ವಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಇನ್ನೂ ಈ ವೇಳೆ ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಧೀಶರಿಗೆ ಸಿಆರ್‌ಪಿಸಿ ಸೆಕ್ಷನ್ 439 ಅಥವಾ ಬಿಎನ್‌ಎಸ್‌ಎಸ್ ಸೆಕ್ಷನ್ 483ರ ವ್ಯಾಪ್ತಿ ತಿಳಿಯದ ಕಾರಣವಾಗಿ ವಿವೇಚನೆಯನ್ನು ಹೇಗೆ ಚಲಾಯಿಸಬೇಕು ಎಂಬುದನ್ನು ವಿಚಾರಣಾ ನ್ಯಾಯಾಧೀಶರು ಅರ್ಥಮಾಡಿಕೊಳ್ಳುವುದಕ್ಕಾಗಿ ಪ್ರತಿ ವರ್ಷ ಹಲವು ಸಮ್ಮೇಳನಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಅಲ್ಲದೇ ತಮ್ಮ ವಿವೇಚನೆಯನ್ನು ಹೇಗೆ ಚಲಾಯಿಸಬೇಕೆಂಬ ಬಗ್ಗೆ ಸಮ್ಮೇಳನ ಹಾಗೂ ಉಪನ್ಯಾಸ ಕಾರ್ಯಕ್ರಮಗಳಿಗೆ ಹಾಜರಾಗಿದ್ದರೂ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ತಿರಸ್ಕರಿಸಲು ತಮ್ಮ ವಿವೇಚನೆಯನ್ನು ಹೆಚ್ಚಾಗಿ ಬಳಸುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

22 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

25 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

57 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

1 hour ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago