ದೇಶ- ವಿದೇಶ

ರಾಹುಲ್‌ ಗಾಂಧಿಗೆ ಸುಪ್ರೀಂಕೋರ್ಟ್‌ ತರಾಟೆ: ಕಾರಣ ಇಷ್ಟೇ

ನವದೆಹಲಿ: ನಿಜವಾದ ಭಾರತೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದೆ.

ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಚೀನಾ 2000 ಕಿಲೋ ಮೀಟರ್‌ನಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ಈ ರೀತಿ ಹೇಳುತ್ತಿರಲಿಲ್ಲ. ಈ ವಿಚಾರವನ್ನು ಸಂಸತ್‌ ಅಧಿವೇಶನದಲ್ಲಿ ಯಾಕೆ ಪ್ರಶ್ನೆ ಮಾಡಲಿಲ್ಲ. ನಿಮ್ಮ ಹೇಳಿಕೆಗೆ ದಾಖಲೆ ಏನಾದರೂ ಇದೆಯಾ ಎಂದು ಪ್ರಶ್ನೆ ಮಾಡಿದೆ.

ಇನ್ನು ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್‌ ಗಾಂಧಿ ಅವರು, ಭಾರತದ ಗಡಿ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ. ಜೊತೆಗೆ 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿರುವುದರ ಬಗ್ಗೆ ಮಾಧ್ಯಮಗಳು ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ ಎಂದು ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

4 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

4 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

4 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

5 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

5 hours ago