Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಕರ್ನಲ್‌ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ: ಸಚಿವ ವಿಜಯ್‌ ಶಾಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ

karnal sophia khureshi

ನವದೆಹಲಿ- ಪಾಕಿಸ್ತಾನ ವಿರುದ್ದ ಯಶಸ್ವಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವರು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ ಸಚಿವ ವಿಜಯ್ ಶಾ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ:- ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ 

ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರೆಂದು ನಿಮಗೆ ತಿಳಿದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

Tags:
error: Content is protected !!