karnal sophia khureshi
ನವದೆಹಲಿ- ಪಾಕಿಸ್ತಾನ ವಿರುದ್ದ ಯಶಸ್ವಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವರು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ ಸಚಿವ ವಿಜಯ್ ಶಾ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ:- ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ
ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ಒಂದು ದಿನದಲ್ಲಿ ನಿಮಗೆ ಏನೂ ಆಗುವುದಿಲ್ಲ. ನೀವು ಯಾರೆಂದು ನಿಮಗೆ ತಿಳಿದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಬಂಧನದಿಂದ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…