ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.15 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದ ಪ್ರಕಾರ, ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರ ನೇತೃತ್ವದ ಪೀಠವೂ ಜನವರಿ.15ರಂದು ವಿಚಾರಣೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.
ಏನಿದು ಪ್ರಕರಣ?
ಕೇಂದ್ರ ಸರ್ಕಾರ, ಚುನಾವಣಾ ನಿಯಮದಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಹಾಗೂ ಅಭ್ಯರ್ಥಿಗಳ ವೀಡಿಯೋ ರೆಕಾರ್ಡಿಂಗ್‌ಗಳಂತಹ ಕೆಲ ಎಲೆಕ್ಟ್ರಾನಿಕ್ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗುವುದನ್ನು ತಡೆಯಲು ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿಯನ್ನು ಮಾಡಿತ್ತು. ಆದರೆ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂಕೋರ್ಟ್ ಮಾಹಿತಿಗೆ ಜೈರಾಮ್ ಪ್ರತಿಕ್ರಿಯೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಲ್ಲಿಸಿರುವ ರಿಟ್ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ. ಅದಕ್ಕೆ ಜೈರಾಮ್ ಅವರು ಪ್ರತಿಕ್ರಿಯೆ ನೀಡಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ನಾಶವಾಗುತ್ತಿದೆ. ಅದನ್ನು ಪುನರ್ ಸ್ಥಾಪಿಸಲು ಸುಪ್ರೀಂಕೋರ್ಟ್ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಬೇಕು. ಅಲ್ಲದೇ ಏಕ ಪಕ್ಷೀಯವಾಗಿ ಹಾಗೂ ಸಾರ್ವಜನಿಕರ ಸಮಾಲೋಚನೆಯಿಲ್ಲದೆ ಇಂತಹ ಪ್ರಮುಖ ಕಾನೂನುಗಳನ್ನು ಲಜ್ಜೆಗೆಟ್ಟ ರೀತಿಯಲ್ಲಿ ತಿದ್ದುಪಡಿ ಮಾಡಲು ಅನುಮತಿಸುವುದಿಲ್ಲ. ಒಂದು ವೇಳೆ ಸಾರ್ವಜನಿಕರಿಗೆ ಅಗತ್ಯವಾದ ರೀತಿಯಲ್ಲಿ ಮಾಹಿತಿ ನೀಡಿ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಜವಾಬ್ದಾರಿಯಿಂದ ನಡೆಸಿದ್ದರೆ, ಆಗ ಇದಕ್ಜೆ ಅರ್ಥ ಇರುತ್ತಿತ್ತು ಎಂದು ಹೇಳಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…