ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದು ಸುಪ್ರಿಂ ಕೋರ್ಟ್ ನಿರ್ದೇಶನ ನೀಡಿದೆ.
1991ರ ಕಾಯಿದೆಯ ಕೆಲವು ನಿಬಂಧನೆಗಳು ವಿಚಾರಣೆಗೆ ವಿರುದ್ಧವಾಗಿವೆ ಎಂದು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿದ್ದು, ಈ ವಿಚಾರವಾಗಿ ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ ಯಾವುದೇ ಮೊಕದ್ದಮೆಗಳನ್ನು ದಾಖಲಿಸುವಂತಿಲ್ಲ. ಹಾಗೆಯೇ ಈಗ ನ್ಯಾಯಾಲಯದಲ್ಲಿರುವ ಅರ್ಜಿಗಳ ಕುರಿತಂತೆ ಪರಿಣಾಮಕಾರಿ ಆದೇಶಗಳನ್ನು ನೀಡುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ.
ಕೇಂದ್ರ ಸರ್ಕಾರ ಈ ಕುರಿತಂತೆ ತಮ್ಮ ಪ್ರತಿಕ್ರಿಯೆ ನೀಡುವವರೆಗೂ ಮುಂದಿನ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪೀಠ ಹೇಳಿದೆ. ಇದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಶೀಘ್ರದಲ್ಲೇ ಉತ್ತರ ನೀಡುತ್ತೇವೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ.
ಈ ಆದೇಶವು ಧಾರ್ಮಿಕ ಮಾಲಿಕತ್ವವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿರುವ ಸುಮಾರು 10ಕ್ಕೂ ಹೆಚ್ಚು ಅರ್ಜಿಗಳ ಮೇಲೆ ಪರಣಾಮ ಬೀರುತ್ತದೆ.
ಆಗಸ್ಟ್ 15, 1947ರಂದು ಪೂಜಾ ಧಾರ್ಮಿಕ ಸ್ಥಳಗಳು ತಮ್ಮ ಮೂಲ ನೆಲೆಯಲ್ಲಿಯೇ ಇರುತ್ತವೆ. ಎಂದು ಪೂಜಾ ಸ್ಥಳ ಕಾಯಿದೆ ಹೇಳುತ್ತದೆ. ಈ ಕಾಯಿದೆಯನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಅವರ ಅರ್ಜಿ ಸೇರಿದಂತೆ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಇನ್ನು ಬಾಕಿ ಉಳಿದಿವೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…