ಹೊಸದಿಲ್ಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಮುಕ್ತಾಯದ ವರದಿಯನ್ನು ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಶನಿವಾರ ಕೋರ್ಟ್‌ಗೆ ಸಲ್ಲಿಸಿದ್ದಾರೆ.
2020ರ ಜೂನ್ 14 ರಂದು ಸುಶಾಂತ್ ಸಿಂಗ್, ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಬಳಿಕ ಸಾವಿನ ಬಗ್ಗೆ ಅನುಮಾನಗಳು ಮೂಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯದಂತೆ ಸಿಬಿಐ ತಂಡ ಪ್ರಕರಣದ ಹೊಣೆ ಹೊತ್ತಿತ್ತು . ಇದೀಗ ನಾಲ್ಕು ವರ್ಷಗಳ ತನಿಖೆಯ ನಂತರ ಇಂದು ಸಿಬಿಐ ಮುಕ್ತಾಯ ವರದಿಯನ್ನು ಸಲ್ಲಿಸಿದೆ. ರಿಯಾ ಮತ್ತು ಕುಟುಂಬದವರು ಸುಶಾಂಗ್ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಹಾಗಾಗಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.





