ದೇಶ- ವಿದೇಶ

ಸುಶಾಂತ್‌ ಸಿಂಗ್‌ ಸಾವು ಪ್ರಕರಣ : 4 ವರ್ಷ ತನಿಖೆ ಬಳಿಕ ಸಾವಿನ ಕಾರಣ ಬಿಚ್ಚಿಟ್ಟ ಸಿಬಿಐ

ಹೊಸದಿಲ್ಲಿ : ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣದ ತನಿಖೆಯ ಮುಕ್ತಾಯದ ವರದಿಯನ್ನು ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಶನಿವಾರ ಕೋರ್ಟ್‌ಗೆ ಸಲ್ಲಿಸಿದ್ದಾರೆ.

2020ರ ಜೂನ್‌ 14 ರಂದು ಸುಶಾಂತ್‌ ಸಿಂಗ್‌, ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಬಳಿಕ ಸಾವಿನ ಬಗ್ಗೆ ಅನುಮಾನಗಳು ಮೂಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯದಂತೆ ಸಿಬಿಐ ತಂಡ ಪ್ರಕರಣದ ಹೊಣೆ ಹೊತ್ತಿತ್ತು . ಇದೀಗ ನಾಲ್ಕು ವರ್ಷಗಳ ತನಿಖೆಯ ನಂತರ ಇಂದು ಸಿಬಿಐ ಮುಕ್ತಾಯ ವರದಿಯನ್ನು ಸಲ್ಲಿಸಿದೆ. ರಿಯಾ ಮತ್ತು ಕುಟುಂಬದವರು ಸುಶಾಂಗ್‌ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಹಾಗಾಗಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಕ್ಕೆ ಕ್ಲೀನ್‌ ಚಿಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

3 mins ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

13 mins ago

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

18 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

21 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

30 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago