ಚಂಡೀಗಡ : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ವ್ಯಕ್ತಿಯೊಬ್ಬ 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರಿಯಾಣದ ರೋಹ್ಟಕ್‍ನಲ್ಲಿ ನಡೆದಿದೆ.
ಮಹಿಳೆ ಮೋಹದಿಂದ ಜೀವಂತ ಸಮಾಧಿಯಾದ ವ್ಯಕ್ತಿಯನ್ನು ಯೋಗ ಶಿಕ್ಷಕ ಜಗದೀಪ್ ಎಂದು ಗುರುತಿಸಲಾಗಿದೆ. ತನ್ನ ಪತ್ನಿಯೊಂದಿಗೆ ಆಕ್ರಮ ಸಂಬಂಧ ಹೊಂದಿದ್ದ ಜಗದೀಪ್‍ನನ್ನು ಸ್ನೇಹಿತರ ಸಹಾಯದಿಂದ ಅಪಹರಿಸಿದ್ದ ಹರ್‍ದೀಪ್ ಎಂಬಾತ ತನ್ನ ಹೊಲದಲ್ಲಿ 7 ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ್ದ.
ಕಳೆದ ವರ್ಷ ಡಿಸೆಂಬರ್‍ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು.ಆದರೆ ಸುದೀರ್ಘ ತನಿಖೆ ನಂತರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.
ಯೋಗ ಶಿಕ್ಷಕರ ಮೃತದೇಹವನ್ನು ಹೊಲದಿಂದ ವಶಪಡಿಸಿಕೊಳ್ಳಲಾಗಿದೆ. ರೋಹ್ಟಕ್‍ನ ಬಾಬಾ ಮಸ್ತ್‍ನಾಥ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿದ್ದವರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.ಅಲ್ಲಿ ಬಾಡಿಗೆ ಮನೆಯ ಓನರ್ ಜತೆ ಅಕ್ರಮ ಸಂಬಂಧ ಹೊಂದಿದ್ದರು.
ಕಳೆದ ಡಿಸೆಂಬರ್ 24 ರಂದು, ಹರ್ದೀಪ್ ಮತ್ತು ಅವನ ಕೆಲವು ಸ್ನೇಹಿತರು ಜಗದೀಪ್ ನನ್ನು ಅಪಹರಿಸಿ, ಕೈಕಾಲುಗಳನ್ನು ಕಟ್ಟಿ, ಚಾರ್ಕಿ ದಾದ್ರಿಯಲ್ಲಿರುವ ಗುಂಡಿ ಬಳಿ ಕರೆದೊಯ್ದು ಥಳಿಸಿದ್ದಾರೆ. ಜಮೀನಿನ ಬಳಿ ಹೋಗಿ ಜೀವಂತವಾಗಿ ಸುಟ್ಟು ಬಳಿಕ ಹೂತುಹಾಕಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಿದ್ದಾರೆ.
ಕೊಲೆಯಾದ 10 ದಿನಗಳ ನಂತರ ಶಿವಾಜಿ ಕಾಲೋನಿ ಪೊಲೀಸ್ ಠಾಣೆಯಲ್ಲಿ ಜಗದೀಪ್ ನಾಪತ್ತೆ ದೂರು ದಾಖಲಾಗಿತ್ತು.
ಸ್ವಲ್ಪ ಸಮಯದ ಹಿಂದೆ ಜಗದೀಪ್ ಅವರ ಕರೆ ದಾಖಲೆಗಳನ್ನು ಪರಿಶೀಲಿಸುವವರೆಗೂ ಪೊಲೀಸರಿಗೆ ಯಾವುದೇ ಸುಳಿವು ಸಿಗಲಿಲ್ಲ. ಇದಾದ ನಂತರ, ಹರ್ದೀಪ್ ಮತ್ತು ಅವನ ಸ್ನೇಹಿತ ಧರ್ಮಪಾಲ್ ರನ್ನು ಬಂಧಿಸಲು ಸಾಕಷ್ಟು ಪುರಾವೆಗಳು ದೊರೆತವು.
ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದ ನಂತರ, ಪೊಲೀಸ್ ಅಧಿಕಾರಿಗಳು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯ ಸಮಯದಲ್ಲಿ, ಇಬ್ಬರೂ ಕೊಲೆಯ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದ್ದಾರೆ.
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…