Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಅತ್ಯಾಚಾರ ಆರೋಪ: ಜಾನಿ ಮಾಸ್ಟರ್‌ಗೆ ಸಿಗಬೇಕಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ.

ಅಕ್ಟೋಬರ್‌.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ ತೆರಳಲು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಮಧ್ಯಂತರ ಜಾಮೀನು ಪಡೆದಿದ್ದರು.

ಈ ಪ್ರಶಸ್ತಿಯನ್ನು ಜಾನಿ ಅವರು ತಿರುಚಿತ್ರಂಬಲಂ ಚಿತ್ರದ ಮೇಘಮ್‌ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಆದರೆ, ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.

ಅಲ್ಲದೇ, ಅಕ್ಟೋಬರ್‌.8ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ನೀಡಿದ್ದ ಆಮಂತ್ರಣವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನಿ ಮಾಸ್ಟರ್‌ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾನಿ ಅವರನ್ನು ಸೈಬರಾಬಾದ್‌ ಪೊಲೀಸರು ಸೆಪ್ಟೆಂಬರ್‌ 19ರಂದು ಗೋವಾದಲ್ಲಿ ಬಂಧಿಸಿ ಆ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ಆದರೆ ಅಕ್ಟೋಬರ್.‌3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.

Tags: