ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ.
ಅಕ್ಟೋಬರ್.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ ತೆರಳಲು ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಮಧ್ಯಂತರ ಜಾಮೀನು ಪಡೆದಿದ್ದರು.
ಈ ಪ್ರಶಸ್ತಿಯನ್ನು ಜಾನಿ ಅವರು ತಿರುಚಿತ್ರಂಬಲಂ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಆದರೆ, ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.
ಅಲ್ಲದೇ, ಅಕ್ಟೋಬರ್.8ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ನೀಡಿದ್ದ ಆಮಂತ್ರಣವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾನಿ ಮಾಸ್ಟರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾನಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19ರಂದು ಗೋವಾದಲ್ಲಿ ಬಂಧಿಸಿ ಆ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.
ಆದರೆ ಅಕ್ಟೋಬರ್.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…