ದೇಶ- ವಿದೇಶ

ತಬಲಾ ಮಾಂತ್ರಿಕ ಜಾಕಿರ್‌ ಹುಸೇನ್‌ ಇನ್ನಿಲ್ಲ

ಹೊಸದಿಲ್ಲಿ: ತಬಲಾ ಮಾಂತ್ರಿಕ ಹಾಗೂ ಗ್ರಾಮ್ಮಿ ಪ್ರಶಸ್ತಿ ವಿಜೇತ ಜಾಕೀರ್‌ ಹುಸೇನ್‌(73) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು(ಡಿ.15) ನಿಧನರಾಗಿದ್ದಾರೆ.

ಜಾಕೀರ್‌ ಹುಸೇನ್‌ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆರು ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ ಜಾಕೀರ್‌ ಹಲವಾರು ಹೆಸರಾಂತ ಅಂತಾರಾಷ್ಟ್ರೀಯ ಮತ್ತು ಭಾರತೀಯ ಕಲಾವಿದರೊಂದಿಗೆ ಸಾಥ್‌ ನೀಡಿದ್ದಾರೆ.

1988ರಲ್ಲಿ ಪದ್ಮ ಶ್ರಿ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಜಾಕೀರ್‌ ಹುಸೇನ್‌ ಭಾಜನರಾಗಿದ್ದರು.

1951 ಮಾರ್ಚ್‌ 9 ರಂದು ಮುಂಬೈನಲ್ಲಿ ಜನಿಸಿದ್ದ ಜಾಕೀರ್‌, ನೃತ್ಯಗಾರ್ತಿ ಮಿನ್ನೆಕೋಲ ಅವರನ್ನು ವಿವಾಹವಾಗಿದ್ದರು. ಅನಿಸಾ ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

11 mins ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

5 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

5 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

9 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

10 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

14 hours ago